ಕುಂದಾಪುರ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ವೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ.
ಬೋಟಿನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ. ರಕ್ಷಿಸಲಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತಕ್ಕೆ ಈಡಾದ ಬೋಟನ್ನು ಸದ್ಯ ಯಶಸ್ವಿಯಾಗಿ ದಡಕ್ಕೆ ತರಲಾಗಿದೆ.
ವಿಶೇಷವೆಂದರೆ, ಕಳೆದ ವಾರವಷ್ಟೇ ಇದೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲಿಯೂ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೋಟಿನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು.
ಆ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಬೋಟು ಅಪಾಯಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ


