HomeFresh Newsಶಿರ್ವ ರೋಟರಿ ವತಿಯಿಂದ ಶಿಕ್ಷಕರ ದಿನಾಚರಣೆ 

ಶಿರ್ವ ರೋಟರಿ ವತಿಯಿಂದ ಶಿಕ್ಷಕರ ದಿನಾಚರಣೆ 

ಬಂಟಕಲ್ : ಭಾರತೀಯ ಪರಂಪರೆಯಲ್ಲಿ ಗುರುವಿಗೆ ವಿಶೇಷ ಗೌರವದ ಸ್ಥಾನವಿದೆ. ವಿದ್ಯಾರ್ಥಿಗಳ ಮೂಲ ಸಮಸ್ಯೆಗಳನ್ನು ಅರಿತು ಅವುಗಳನ್ನು ವಸ್ತುನಿಷ್ಠವಾಗಿ ಪರಿಹರಿಸುವುದು ಶಿಕ್ಷಕರಿಂದ ಮಾತ್ರ ಸಾಧ್ಯ. ಶಿಕ್ಷಣ ಸಂಸ್ಥೆಯ ಉನ್ನತಿಯಲ್ಲಿ ಶಿಕ್ಷಕರ ಪರಿಶ್ರಮ ಪ್ರಮುಖವಾಗಿದ್ದು, ಉತ್ತಮ ಶಿಕ್ಷಕರಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯ ಜೊತೆಗೆ ಶಿಕ್ಷಣ ಸಂಸ್ಥೆಯ ಕೀರ್ತಿಯೂ ಹೆಚ್ಚುತ್ತದೆ ಎಂದು ಶಿರ್ವ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ್ ಶೆಟ್ಟಿ ಹೇಳಿದರು.

ಬಂಟಕಲ್ಲಿನ ರೋಟರಿ ಭವನದಲ್ಲಿ ಶಿರ್ವ ರೋಟರಿ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳೆಲ್ಲರನ್ನು ಸಮಾನವಾಗಿ ಕಾಣುವಂತಹ ಶಿಕ್ಷಕರು ಹೆಚ್ಚಿನ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಶಿವ ಹಿಂದೂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಭಾಸ್ಕರ್ ಮೇರ್, ಪಡುಬಳ್ಳೆ ಶ್ರೀನಾರಾಯಣ ಗುರು ಪ್ರೌಢಶಾಲೆಯ ಶಿಕ್ಷಕಿ ಅರುಂಧತಿ ಪ್ರಭು, ಶಿರ್ವ ಸಂತ ಮೇರಿ ಕಾಲೇಜಿನ ಉಪನ್ಯಾಸಕ ಡಾ. ವಿಠಲ್ ನಾಯಕ್ ಹಾಗೂ ಪಡುಬಿದ್ರಿ ಕೆಪಿಎಸ್‌ನ ನಿವೃತ್ತ ಶಿಕ್ಷಕಿ ಜೆಸಿಂತಾ ಡಿಸೋಜಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇತರ ಶಿಕ್ಷಕರನ್ನೂ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಿರ್ವ ರೋಟರಿ ಅಧ್ಯಕ್ಷೆ ಜೆಸಿಂತಾ ಡಿಸೋಜಾ ವಹಿಸಿದ್ದರು. ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಸನ್ಮಾನಿತರನ್ನು ಜೆ.ಕೆ. ಆಳ್ವ, ಹೊನ್ನಯ್ಯ ಶೆಟ್ಟಿಗಾರ್, ಮೌರಿಸ್ ಡಿಸೋಜಾ ಹಾಗೂ ಮೈಕಲ್ ಮತಾಯಸ್ ಪರಿಚಯಿಸಿದರು.ರೋಟರಿ ವಲಯ ಸೇನಾನಿ ವಿಷ್ಣುಮೂರ್ತಿ ಸರಳಾಯ ಶುಭ ಹಾರೈಸಿದರು. ಹಿರಿಯ ಸದಸ್ಯ ಬಿ.ಪುಂಡಲೀಕ ಮರಾಠೆ ನಿರೂಪಿಸಿದರು. ಕಾರ್ಯದರ್ಶಿ ವಿಲಿಯಂ ಮಚಾದೋ ಧನ್ಯವಾದವಿತ್ತರು.ಶಿರ್ವ ರೋಟರಿಗೆ 19 ಜಿಲ್ಲಾ ಪ್ರಶಸ್ತಿಗಳು
57 ವರ್ಷಗಳ ಸೇವಾ ಇತಿಹಾಸ ಹೊಂದಿರುವ ಶಿರ್ವ ರೋಟರಿ ಸಂಸ್ಥೆಯು 2025–26ನೇ ಸಾಲಿನಲ್ಲಿ ಕೈಗೊಂಡ ವಿವಿಧ ಸೇವಾ ಕಾರ್ಯಯೋಜನೆಗಳನ್ನು ಪರಿಗಣಿಸಿ ಅಂತರಾಷ್ಟ್ರೀಯ ರೋಟರಿಯಿಂದ ‘ಕ್ಲಬ್ ಎಕ್ಸಲೆನ್ಸ್ ಅವಾರ್ಡ್’ ಸೇರಿದಂತೆ ನಾಲ್ಕು ಕಂದಾಯ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 3182ರಲ್ಲಿ ಸಾಧಿಸಿದ ಸಮಾಜಮುಖಿ ಸೇವಾ ಯೋಜನೆಗಳಿಗೆ ಒಟ್ಟು 19 ಜಿಲ್ಲಾ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.ಈ ಪ್ರಶಸ್ತಿಗಳನ್ನು ರೋಟರಿ ವಲಯದ ಐದನೇ ಸಹಾಯಕ ಗವರ್ನರ್ ವಿಘ್ನೇಶ್ ಶೆಣೈ ಹಾಗೂ ವಲಯ ಕಾರ್ಯದರ್ಶಿ ಆಲ್ವಿನ್ ನೇರಿ ಪಿಂಟೋ ಅವರು ನಿಕಟಪೂರ್ವ ಅಧ್ಯಕ್ಷ ವಿಲಿಯಂ ಮಚಾದೋ ಹಾಗೂ ಕಾರ್ಯದರ್ಶಿ ಹೊನ್ನಯ್ಯ ಶೆಟ್ಟಿಗಾರ್ ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ರೋಟರಿ ಪ್ರತಿಷ್ಠಾನಕ್ಕೆ ದೇಣಿಗೆ ನೀಡಿದ ರಿಚರ್ಡ್ ಪಾಲ್ ಫೆರಾವೋ ಅವರಿಗೆ ‘ಪಾಲ್ ಹ್ಯಾರಿಸ್ ಫೆಲೋ’ ಗೌರವ ಹಾಗೂ ರಫಾಯಲ್ ಮತಾಯಸ್ ಅವರಿಗೆ MPHF ಗೌರವ ಪ್ರದಾನ ಮಾಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments