ಉಡುಪಿ: ಹೆಬ್ರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹೆಲಿಪ್ಯಾಡ್ ಹಾಗೂ ಸಭಾ ಕಾರ್ಯಕ್ರಮ ನಡೆಯಲಿರುವ ಸ್ಥಳದ ಪರಿಶೀಲನೆ ನಡೆಸಲಾಯಿತು.
ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಹಲವು ಮಾಹಿತಿ ನೀಡಿದರು. ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆ, ಸಂಚಾರ ನಿರ್ವಹಣೆ ಹಾಗೂ ಅಗತ್ಯ ಪೂರ್ವಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.
ವಿವಿಧ ಅಧಿಕಾರಿಗಳು, ಉದ್ಯಮಿ ಹೆಬ್ರಿ ಸತೀಶ್ ಪೈ, ಚಾರ ವಾದಿರಾಜ ಶೆಟ್ಟಿ, ಕಾಂಗ್ರೆಸ್ ಪ್ರಮುಖರಾದ ಪ್ರವೀಣ್ ಬಲ್ಲಾಳ್, ದಿನೇಶ್ ಶೆಟ್ಟಿ ಹುತ್ತುರ್ಕೆ, ಶಂಕರ ಶೇರಿಗಾರ್, ಎಚ್. ಜನಾರ್ದನ್, ನಿಲೇಶ್ ಪೂಜಾರಿ ಸೇರಿದಂತೆ ಹಲವರು ಹಾಜರಿದ್ದರು.

