HomeFresh Newsಬಂಟಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಬಂಟಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಬಂಟಕಲ್, ಸೆ.21: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮವು ಸೆ.18ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ತಾತಾಳ್ ಮಾತನಾಡಿ, ವಿದ್ಯಾರ್ಥಿ ಪರಿಷತ್ ಸದಸ್ಯರು ಸಂಸ್ಥೆಯ ಮೇಲಿನ ಬದ್ಧತೆ ಹಾಗೂ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದಪ್ರದಾನ ಮಾಡಲಾಯಿತು. ಡಾ. ದೀಪಿಕಾ ಬಿ.ವಿ. ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಪರಿಷತ್ ಪ್ರಧಾನ ಕಾರ್ಯದರ್ಶಿ ಶ್ರೀ ರಾಗೇಶ್ ಪೂಜಾರಿ ಸ್ವಾಗತಿಸಿದರು.
ಪ್ರಾಂಶುಪಾಲ ಡಾ. ನಾಗರಾಜ್ ಭಟ್ ಅವರು ನೂತನ ವಿದ್ಯಾರ್ಥಿ ಪರಿಷತ್ ಸಂಸ್ಥೆ ಹಾಗೂ ಸಮಾಜಕ್ಕೆ ಪ್ರಯೋಜನಕಾರಿಯಾಗುವಂತಹ ಕಾರ್ಯಗಳನ್ನು ಕೈಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ವಿದ್ಯಾರ್ಥಿಗಳಾದ ಶ್ರೀ ಅಭಿಷೇಕ್ ಕಿಣಿ, ತೇಜಸ್ ನಾಯಕ್ ಹಾಗೂ ಭೂಷಣ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಪಡಿಸಲಾದ ಸಂಸ್ಥೆಯ ನೂತನ ವಿದ್ಯಾರ್ಥಿ ಚುನಾವಣೆ ಪೋರ್ಟಲ್ ‘ಧ್ವನಿ’ ಕುರಿತು ಕಾರ್ಯಕ್ರಮದಲ್ಲಿ ವಿವರಿಸಲಾಯಿತು.
ಕಾಲೇಜಿನ ಮಾಧ್ಯಮ ತಂಡ ‘ಉತ್ಕರ್ಷ್’, ವೆಬ್‌ಸೈಟ್ ತಂಡ ಹಾಗೂ 2025-26ನೇ ಸಾಲಿನ ವಿದ್ಯಾರ್ಥಿ ಪರಿಷತ್ ಸದಸ್ಯರ ಕೊಡುಗೆಗಳನ್ನು ಗುರುತಿಸಿ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments