HomeFresh Newsನವದೆಹಲಿಯಲ್ಲಿ ಪೇಜಾವರ ಶ್ರೀಗಳಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿಯಲ್ಲಿ ಪೇಜಾವರ ಶ್ರೀಗಳಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ: ಇಂದ್ರಪ್ರಸ್ಥ ಚಾತುರ್ಮಾಸ್ಯ ವ್ರತದ ಹಿನ್ನೆಲೆಯಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಪೇಜಾವರ ಮಠದ ವತಿಯಿಂದ ಆಯೋಜಿಸಲಿರುವ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವದ ಪಂಚವಾರ್ಷಿಕ ಕಾರ್ಯಕ್ರಮದ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.
ದೇಶ, ಧರ್ಮ, ಸಮಾಜ, ಶಿಕ್ಷಣ ಹಾಗೂ ಸನಾತನ ಸಂಸ್ಕೃತಿಯ ಸಂರಕ್ಷಣೆಯ ಕ್ಷೇತ್ರಗಳಲ್ಲಿ ಪೇಜಾವರ ಮಠ ಸಲ್ಲಿಸುತ್ತಿರುವ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಮಠದ ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಪರಂಪರೆ ಮುಂದಿನ ಪೀಳಿಗೆಗಳಿಗೂ ಪ್ರೇರಣೆಯಾಗಿದೆ ಎಂದು ತಿಳಿಸಲಾಯಿತು.
ಈ ಐತಿಹಾಸಿಕ ಸಂದರ್ಭದಲ್ಲಿ ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಕೂಡ ಉಪಸ್ಥಿತರಿದ್ದರು.
ವಿಕಸಿತ ಭಾರತ–2047ರ ಸಂಕಲ್ಪದತ್ತ ದೇಶ ಸಾಗುತ್ತಿರುವ ಸಂದರ್ಭದಲ್ಲಿ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ, ಶಿಕ್ಷಣ, ಪರಿಸರ ಸಂರಕ್ಷಣೆ, ಸಾಮಾಜಿಕ ಸೇವೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಉದ್ಯಮಿಗಳು ಮತ್ತು ಸಮಾಜಮುಖಿ ನಾಯಕರು ನೀಡುವ ಕೊಡುಗೆ ಮಹತ್ವದ್ದಾಗಿದೆ.
ಸಾಮಾಜಿಕ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಬದ್ಧತೆ ಇನ್ನಷ್ಟು ಜನರಿಗೆ ಪ್ರೇರಣೆಯಾಗಲಿ ಎಂದು ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್, ಕುಂತಳನಗರ, ಉಡುಪಿ ವತಿಯಿಂದ ಶುಭ ಹಾರೈಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments