ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಕಾಪು ತಾಲೂಕು ಮಟ್ಟದ ಭಜನಾ ಪರಿಷತ್ ರಚನೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ಬುಧವಾರ ಕಾಪು ವೀರಭದ್ರ ಸಮುದಾಯ ಭವನದಲ್ಲಿ ನಡೆಯಿತು.
ಸಭೆಯಲ್ಲಿ ತಾಲೂಕು ಮಟ್ಟದ ಭಜನಾ ಪರಿಷತ್‌ನ ಪದಾಧಿಕಾರಿಗಳ ಆಯ್ಕೆ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.
ಮಜೂರು ಶ್ರೀ ರಾಮ ಭಜನಾ ಮಂಡಳಿಯ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು ಅವರನ್ನು ಪರಿಷತ್‌ನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕೆಮ್ಮುಂಡೇಲು ಭಜನಾ ಮಂಡಳಿಯ ಚಂದ್ರಶೇಖರ್ ಹಾಗೂ ಉದ್ಯಾವರ ಶ್ರೀ ರಾಮ ಭಜನಾ ಮಂಡಳಿಯ ರವಿ ಅವರನ್ನು ಆಯ್ಕೆ ಮಾಡಲಾಯಿತು. ನಾಗೇಶ್ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಭಜನಾ ಪರಿಷತ್‌ನ ನಿರ್ದೇಶಕ ನಾಗರಾಜ್ ಶೆಟ್ಟಿ ಅವರು ಪರಿಷತ್‌ನ ಕಾರ್ಯವೈಖರಿ ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ನವೀನ್ ಅಮೀನ್, ಪಡುಬಿದ್ರಿ ಆದಿಶಕ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುಧಾಕರ್ ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ಭಜನಾ ತಂಡಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕಿನ ವಿವಿಧ ಭಜನಾ ಮಂಡಳಿಗಳ ಪ್ರತಿನಿಧಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿದರು.


