ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಪಡುಬಿದ್ರಿ ವಲಯದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವು ಪಡುಬಿದ್ರಿ ಪ್ರಸನ್ನ ಪಾರ್ವತಿ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಕಾರ್ಯಾಗಾರವನ್ನು ಪ್ರಸನ್ನ ಪಾರ್ವತಿ ದೇವಸ್ಥಾನದ ಅರ್ಚಕ ಜಗದಾಭಿರಾಮ ಸ್ವಾಮಿ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ತರಬೇತಿ ನೀಡಿ, ಸಂಘಗಳ ನಿರ್ವಹಣೆ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಬ್ಯಾಂಕ್ ವ್ಯವಹಾರಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ ಅವರು ಸಂಘಗಳ ವಾರದ ಸಭೆ ನಿರ್ವಹಣೆ, ಕ್ಷೇತ್ರದಿಂದ ದೊರೆಯುವ ಸೌಲಭ್ಯಗಳು ಹಾಗೂ ಬಡ್ಡಿದರಗಳ ಕುರಿತು ಮಾಹಿತಿ ನೀಡಿದರು.
ವಲಯಾಧ್ಯಕ್ಷ ಭುಜಂಗ ಆಚಾರ್ಯ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಲಯ ಮೇಲ್ವಿಚಾರಕ ಜಗದೀಶ್ ಪೂಜಾರಿ ಸೇರಿದಂತೆ ವಲಯದ ಸೇವಾ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


