HomeFresh Newsಕಡಬದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಕಡಬದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಕಡಬ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಹಾಗೂ ಅರಿವು ಕಾರ್ಯಕ್ರಮ ನಡೆಯಿತು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ಪುತ್ತೂರು ವಕೀಲರ ಸಂಘ, ಕಡಬ ತಾಲ್ಲೂಕು ಪಂಚಾಯತ್, ಕಡಬ ಪಟ್ಟಣ ಪಂಚಾಯತ್ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪುತ್ತೂರಿನ 2ನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಲಯದ ಜೆಎಂಎಫ್‌ಸಿ ಕು. ರಮ್ಯಾ.ಆರ್. ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹಿರಿಯ ನಾಗರಿಕರನ್ನು ಮಕ್ಕಳು ಗೌರವದಿಂದ ನೋಡಿಕೊಳ್ಳಬೇಕು. ವೃದ್ಧಾಪ್ಯದಲ್ಲಿ ಅವರ ಯೋಗಕ್ಷೇಮದ ಜವಾಬ್ದಾರಿಯನ್ನು ಮಕ್ಕಳು ವಹಿಸಬೇಕು ಎಂದು ಸಲಹೆ ನೀಡಿದರು.

ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಎಂ. ಮಾತನಾಡಿ, ತಂದೆ-ತಾಯಿಯರು ಕಷ್ಟಪಟ್ಟು ಮಕ್ಕಳನ್ನು ಬೆಳೆಸಿದ್ದು, ವೃದ್ಧಾಪ್ಯದಲ್ಲಿ ಅವರನ್ನು ವೃದ್ಧಾಶ್ರಮಕ್ಕೆ ಸೇರಿಸದೆ ಅವರ ಯೋಗಕ್ಷೇಮ ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ ಎಂದರು.

ಕಾರ್ಯಕ್ರಮದಲ್ಲಿ ಕಾನೂನು ಅರಿವು, ಹಿರಿಯ ನಾಗರಿಕರ ಗುರುತಿನ ಚೀಟಿ, ಪಿಂಚಣಿ ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು. ಹಿರಿಯ ನಾಗರಿಕರ ಆರೋಗ್ಯ ಮತ್ತು ದಿನನಿತ್ಯದ ಆರೈಕೆ ಕುರಿತಂತೆಯೂ ಚರ್ಚೆ ನಡೆಯಿತು.

ಕಡಬ ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ನಾರಾಯಣ ಬಿ. ಅಧ್ಯಕ್ಷತೆ ವಹಿಸಿದ್ದರು. ಉಪ ತಹಸೀಲ್ದಾರ್ ಎಸ್.ಎನ್. ಶಾಯದುಲ್ಲಾ ಖಾನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರು, ಪುನರ್ವಸತಿ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments