HomeFresh Newsಕರವೇ ದ.ಕ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅನಿಲ್ ದಾಸ್ ರಾಜೀನಾಮೆ

ಕರವೇ ದ.ಕ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅನಿಲ್ ದಾಸ್ ರಾಜೀನಾಮೆ

ಕರ್ನಾಟಕ ರಕ್ಷಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಲಯನ್ ಅನಿಲ್ ದಾಸ್ ರಾಜೀನಾಮೆ ನೀಡಿದ್ದಾರೆ. ಕಳೆದ 8 ವರ್ಷಗಳಿಂದ ಕನ್ನಡ ಪರ ಹೋರಾಟ, ಸಂಘಟನಾ ಚಟುವಟಿಕೆ ಹಾಗೂ ತುಳುನಾಡಿನಲ್ಲಿ ಸಂಘಟನೆಯನ್ನು ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಅನಿಲ್ ದಾಸ್, ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಘಟನೆಯಲ್ಲಿ ಮುಂದುವರಿಯಲು ಅಸಾಧ್ಯವಾಗಿರುವ ಕಾರಣ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಕನ್ನಡ ಪರ ಹೋರಾಟಗಳು ಹಾಗೂ ಅನೇಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಂಘಟನೆಯನ್ನು ಮುನ್ನಡೆಸಿದ್ದ ಅನಿಲ್ ದಾಸ್, ಜಿಲ್ಲೆಯ ಜೊತೆಗೆ ಬೆಂಗಳೂರು ಕೇಂದ್ರ ಕಚೇರಿ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿದ್ದಾರೆ.

ತಮ್ಮ ಮನಸ್ಸಿಗೆ ನೋವಾಗುವಂತಹ ಕೆಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಂಘಟನೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅನಿಲ್ ದಾಸ್ ಹೇಳಿದ್ದಾರೆ.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments