ಬಂಟ್ವಾಳ: ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ಲಾರಿಗಳಿಗೆ ಅಕ್ರಮವಾಗಿ ಮರಳು ತುಂಬುತ್ತಿದ್ದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮರಳು ತುಂಬಿದ್ದ 3 ಟಿಪ್ಪರ್ ಲಾರಿ, 1 ಜೆಸಿಬಿ, ಮರಳು ತುಂಬಲು ಬಳಸುತ್ತಿದ್ದ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು 4 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶುಕ್ರವಾರ ಮುಂಜಾನೆ ವೇಳೆ, ನದಿ ಕಿನ್ನಾರೆಯಿಂದ ಅಕ್ರಮವಾಗಿ ಮರಳನ್ನು ತೆಗೆದು, ಲಾರಿಗಳಲ್ಲಿ ತುಂಬಿಸುತ್ತಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ರನ್ನಗೌಡ ಪಾಟೀಲ ರವರಿಗೆ ಖಚಿತ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 3 ಟಿಪ್ಪರ್ ಲಾರಿಗೆ ಜೆ ಸಿ ಬಿ ಮೂಲಕ ಅಕವಾಗಿ ಮರಳು ತುಂಬಿರುವುದು ಕಂಡು ಬಂದಿರುತ್ತದೆ. ಈ ಸಂದರ್ಭ 4 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು ಸೊತ್ತಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 25,24,700 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ನಿಹಾನ್, ರಾಜೀಕ್, ಮೊಹಮ್ಮದ್ ಶಂಶೀರ್, ಮಹಮ್ಮದ್ ಅಶ್ರಫ್, ಸ್ಟೀವನ್ ಡಿಸೋಜಾ ಎಂಬವರು ಹಾಗೂ ಕೃತ್ಯಕ್ಕೆ ಸಹಕರಿಸಿದ ರೈಟರ್ ಶಿವಪ್ರಸಾದ್ ಆಳ್ವ ಮತ್ತು ಇತರರು ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಂಬೆಯಲ್ಲಿ ಅಕ್ರಮ ಮರಳುಗಾರಿಕೆ: 3 ಟಿಪ್ಪರ್, ಜೆಸಿಬಿ ವಶ–4 ಮಂದಿ ಪೊಲೀಸ್ ವಶಕ್ಕೆ
RELATED ARTICLES

