HomeFresh Newsಟ್ಯಾಂಕರ್‌ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಟ್ಯಾಂಕರ್‌ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಬಜತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್‌ವೊಂದು ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಅಣ್ಣು ಎಂದು ಗುರುತಿಸಲಾಗಿದೆ. ಸೆ.25ರಂದು ರಾತ್ರಿ 11 ಗಂಟೆ ಸುಮಾರಿಗೆ ಅಣ್ಣು ಅವರು ಮೋಟಾರ್ ಸೈಕಲ್‌ನಲ್ಲಿ ಗೋಳಿತೊಟ್ಟು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದರು. ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಎದುರಿನಿಂದ ಮಂಗಳೂರು ಕಡೆಯಿಂದ ಹಾಸನ ಕಡೆಗೆ ಬರುತ್ತಿದ್ದ ಮಲ್ಲಪ್ಪ ಸಂಕೋನಟ್ಟಿ ಅವರು ಚಲಾಯಿಸುತ್ತಿದ್ದ ಟ್ಯಾಂಕರ್ ಲಾರಿಯ ಬಲಭಾಗದ ಮುಂಭಾಗದ ಚಕ್ರದ ಮಡ್‌ಗಾರ್ಡ್‌ಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ಅಣ್ಣು ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಕುರಿತು ಮಲ್ಲಪ್ಪ ಸಂಕೋನಟ್ಟಿ ನೀಡಿದ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments