ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಬಂಧಿಸಿ, ಅವರುಗಳಿಂದ ಸುಮಾರು ₹ 24 ಲಕ್ಷ ಮೌಲ್ಯದ 240 ಗ್ರಾಂ MDMA ಮಾದಕವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.
ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ MDMA ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿನಾಂಕ 26-09-2026 ರಂದು ಸಂಜೆ ಉಳ್ಳಾಲ ತಾಲುಕು ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು ₹ 24,00,000 ಮೌಲ್ಯದ 240 ಗ್ರಾಂ ಎಂಡಿಎಂಎ ಹಾಗೂ 4 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಟೆಂಪೋ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 29,80,000/- ಆಗಿರುತ್ತದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ..
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: 24 ಲಕ್ಷ ಮೌಲ್ಯದ 240 ಗ್ರಾಂ MDMA ವಶ, ಮೂವರ ಬಂಧನ
RELATED ARTICLES

