ಬೆಳ್ಳೆ: ಕಾಪು ತಾಲೂಕು ಪಂಚಾಯತ್‌ನ ನಿಕಟಪೂರ್ವ ಕಾರ್ಯನಿರ್ವಹಣಾಧಿಕಾರಿ ಹಾಗೂ ಪಂಚಾಯತ್ ಜಮಾಬಂದಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಹಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಜೇಮ್ಸ್ ಡಿ. ಸಿಲ್ವಾ ಅವರು ಬೆಳ್ಳೆ ಗ್ರಾಮ ಪಂಚಾಯತ್‌ಗೆ ಆತ್ಮನಿರ್ಭರ ಭಾರತ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ ಮಾಡುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು.
ಪಂಚಾಯತ್ ಅಭಿವೃದ್ಧಿ ಕಾರ್ಯಗಳಲ್ಲಿ ಸಹಕರಿಸಿದ ಜೇಮ್ಸ್ ಡಿ. ಸಿಲ್ವಾ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಬೆಳ್ಳೆ ಗ್ರಾಮ ಪಂಚಾಯತ್ ಕೈಗೊಂಡಿರುವ ವಿವಿಧ ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ದಾಖಲಿಸಿ, ರಾಷ್ಟ್ರೀಯ ಮಟ್ಟದ ಪುರಸ್ಕಾರಕ್ಕೆ ನಾಮನಿರ್ದೇಶನಗೊಳ್ಳುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ, ಮಾಜಿ ಅಧ್ಯಕ್ಷೆ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷ ಶಶಿಧರ ವಾಗ್ಳೆ, ಸದಸ್ಯರಾದ ಪರಶುರಾಮ ಭಟ್, ಎಸ್‌ಡಿಎ ಸದಾನಂದ ಪೂಜಾರಿ ಸೇರಿದಂತೆ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಅಧಿಕಾರಿಗಳಾದ ಚಂದ್ರಮಣಿ, ಶಿವರಾಮ್, ಸಿಬ್ಬಂದಿಗಳಾದ ರೇಶ್ಮಾ, ನೀತಾ, ರಕ್ಷಿತಾ, ಯಶೋದಾ, ಚಂಡಿಕಾ, ಧನಲಕ್ಷ್ಮೀ, ವಸಂತ, ಪ್ರೀತೇಶ್, ರಮೇಶ್ ಶೆಟ್ಟಿ, ಸುಂದರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


