HomeUncategorizedಉಡುಪಿ: ಶ್ರೀ ಕೃಷ್ಣ ಮಠಕ್ಕೆ ಮಾಜಿ ಸಚಿವೆ ರೋಜಾ ಸೆಲ್ವಮಣಿ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಮಾಜಿ ಸಚಿವೆ ರೋಜಾ ಸೆಲ್ವಮಣಿ ಭೇಟಿ

ಉಡುಪಿ: ಖ್ಯಾತ ನಟಿ ಹಾಗೂ ಆಂಧ್ರಪ್ರದೇಶದ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಯುವಜನ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ರೋಜಾ ಸೆಲ್ವಮಣಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ರೋಜಾ ಸೆಲ್ವಮಣಿ ಅವರು ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶ್ರೀಪಾದರು ರೋಜಾ ಸೆಲ್ವಮಣಿ ಅವರಿಗೆ ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments