ಎಂಆರ್ಪಿಎಲ್ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದ ಭಾರೀ ಸ್ಫೋಟ – ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನಿಶ್ ಕರ್ಕರ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಅವಘಡ ನಡೆದ ಪ್ರದೇಶದಲ್ಲಿ ಕಣ್ಮರೆಯಾಗಿದ್ದು, ಮನಿಶ್ ಅವರು ಅಲ್ಲಿ ಗುತ್ತಿಗೆಯಾಧಾರದಡಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಸುಟ್ಟ ಗಾಯಗಳು ಹಾಗೂ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

