HomeFresh Newsನಿವೃತ್ತ ಪಿಡಿಒ ಪ್ರಕಾಶ್ ಶೆಟ್ಟಿಗೆ ಸಾನಿಧ್ಯ ಸಂಸ್ಥೆಯಿಂದ ಗೌರವ ಸನ್ಮಾನ

ನಿವೃತ್ತ ಪಿಡಿಒ ಪ್ರಕಾಶ್ ಶೆಟ್ಟಿಗೆ ಸಾನಿಧ್ಯ ಸಂಸ್ಥೆಯಿಂದ ಗೌರವ ಸನ್ಮಾನ

ಉಜಿರೆ: ಉಜಿರೆ ಗ್ರಾಮ ಪಂಚಾಯತ್‌ನ ಪಿಡಿಒ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ನೋಚ್ಚಾ ಪ್ರಕಾಶ್ ಶೆಟ್ಟಿ ಅವರನ್ನು ಸಾನಿಧ್ಯ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಪ್ರಕಾಶ್ ಶೆಟ್ಟಿ ಅವರ ನಿವೃತ್ತಿಯ ಹಿನ್ನೆಲೆಯಲ್ಲಿ ಉಜಿರೆ ಗ್ರಾಮದ ‘ಪ್ರಕಾಶ್ ಅಭಿನಂದನಾ ಸಮಿತಿ’ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾನಿಧ್ಯ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ, ಪ್ರಕಾಶ್ ಶೆಟ್ಟಿ ಅವರ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಾನಿಧ್ಯ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ವಸಂತ್ ಕುಮಾರ್ ಅವರು ಸಂಸ್ಥೆಯ ಪರವಾಗಿ ಪ್ರಕಾಶ್ ಶೆಟ್ಟಿ ಅವರನ್ನು ಸನ್ಮಾನಿಸಿ, ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶ್ರೀ ಗಣೇಶ್ ಸೇವಾ ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯ ಸಂತೋಷ್ ಶೆಟ್ಟಿ ಕುಂಬ್ಲೆ, ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮೇಲ್ವಿಚಾರಕಿ ಮಲ್ಲಿಕಾ ಹಾಗೂ ಕೇಂದ್ರದ ಕರಕುಶಲ ವಿಭಾಗದ ಶ್ರೀಮತಿ ಹೆಲೆನ್ ಉಪಸ್ಥಿತರಿದ್ದರು.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments