HomeFresh Newsಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 50 ಮಂದಿಯ ಅಧ್ಯಯನ ತಂಡ ಭೇಟಿ

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 50 ಮಂದಿಯ ಅಧ್ಯಯನ ತಂಡ ಭೇಟಿ

ಪಡುಬಿದ್ರಿ: ಬೆಂಗಳೂರು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಬೆಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್‌ನ ಸಿಬ್ಬಂದಿ ಒಳಗೊಂಡ 50 ಮಂದಿಯ ಅಧ್ಯಯನ ತಂಡವು ಸೆ.29ರಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಭೇಟಿ ನೀಡಿತು.
ಮಂಗಳೂರು ನಬಾರ್ಡ್ ತರಬೇತಿ ಸಂಸ್ಥೆಯ ಉಪ ಮಹಾಪ್ರಬಂಧಕ ಯೋಗೀಶ್ ಅವರ ನೇತೃತ್ವದಲ್ಲಿ ಆಗಮಿಸಿದ ತಂಡವು ಸೊಸೈಟಿಯ ಕಾರ್ಯವೈಖರಿ, ಸದಸ್ಯರಿಗೆ ನೀಡುತ್ತಿರುವ ವಿವಿಧ ಸೇವೆ-ಸೌಲಭ್ಯಗಳು ಹಾಗೂ ಸಂಸ್ಥೆಯ ಅಭಿವೃದ್ಧಿಯ ಕುರಿತು ಮಾಹಿತಿ ಪಡೆದುಕೊಂಡಿತು.
ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಅವರು ಸಂಸ್ಥೆಯು ನಡೆದು ಬಂದಿರುವ ಹಾದಿ, ಸದಸ್ಯರಿಗೆ ಒದಗಿಸುತ್ತಿರುವ ವಿವಿಧ ಸೇವೆಗಳು ಮತ್ತು ಸೌಲಭ್ಯಗಳ ಕುರಿತು ವಿವರಿಸಿದರು. ಯಾವುದೇ ಸಹಕಾರ ಸಂಸ್ಥೆಯ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ನಡುವಿನ ಹೊಂದಾಣಿಕೆ ಅತ್ಯಂತ ಮುಖ್ಯವಾಗಿದ್ದು, ರಾಜಕೀಯ ರಹಿತವಾಗಿ ಕರ್ತವ್ಯ ನಿರ್ವಹಿಸಿದಲ್ಲಿ ಸಹಕಾರ ಸಂಸ್ಥೆಗಳು ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.


ನಬಾರ್ಡ್ ತರಬೇತಿ ಸಂಸ್ಥೆಯ ಉಪ ಮಹಾಪ್ರಬಂಧಕ ಯೋಗೀಶ್ ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರಂಭದಲ್ಲಿ ಹಲವು ಅಡಚಣೆಗಳನ್ನು ಎದುರಿಸಿದ್ದರೂ ಅವುಗಳನ್ನು ಮೀರಿ ಸಂಸ್ಥೆ ಅಭಿವೃದ್ಧಿ ಸಾಧಿಸಿರುವುದು ಗಮನಾರ್ಹ ಎಂದರು.
ಇಲ್ಲಿನ ಸಹಕಾರಿ ಸಂಘಗಳು ಅಳವಡಿಸಿಕೊಂಡಿರುವ ಉತ್ತಮ ಕಾರ್ಯವೈಖರಿ ಹಾಗೂ ಯೋಜನೆಗಳನ್ನು ಇತರ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿಯೂ ಅಳವಡಿಸಿಕೊಂಡಲ್ಲಿ ಅವುಗಳು ಮತ್ತಷ್ಟು ಬಲಿಷ್ಠಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಅಗತ್ಯ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್, ನಿರ್ದೇಶಕರಾದ ಕೃಷ್ಣ ಬಂಗೇರ, ಹಸನ್ ಬಾವಾ, ವಲಯ ಮೇಲ್ವಿಚಾರಕ ಬಾಲ ಗೋಪಾಲ್ ಬಲ್ಲಾಳ್ ಕೆ., ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಿಶ್ಚಿತಾ ಪಿ.ಎಚ್., ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ದೀಪಕ್ ಸಾಲ್ಯಾನ್, ನಬಾರ್ಡ್ ಗ್ರೇಡ್-ಬಿ ಅಧಿಕಾರಿ ಹಾಗೂ ಸೊಸೈಟಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments