HomeFresh Newsಶಿರ್ತಾಡಿಯಲ್ಲಿ ಮರಗಳ್ಳತನ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಶಿರ್ತಾಡಿಯಲ್ಲಿ ಮರಗಳ್ಳತನ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಮೂಡುಬಿದಿರೆ : ಸರಕಾರಿ ಜಾಗದಿಂದ ಮರಗಳ್ಳತನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ   ಅರಣ್ಯ ಇಲಾಖಾಧಿಕಾರಿಗಳು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿರ್ತಾಡಿಯ ಧರ್ಮರಾಜ ಪೂವಣಿ ಹಾಗೂ ಪೂರ್ಣಚಂದ್ರ ಶೆಟ್ಟಿ ಈ ಪ್ರಕರಣದ ಆರೋಪಿಗಳು.

ಶಿರ್ತಾಡಿ ಪರಿಸರದ ಸರಕಾರಿ ಜಾಗದಲ್ಲಿರುವ ಮರಗಳನ್ನು ಕಡಿದು ದೈವಸ್ಥಾನವೊಂದರ ಹೆಸರಿನಲ್ಲಿ ಸಾಗಿಸಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಸುದತ್ತ ಜೈನ್ ಶಿರ್ತಾಡಿ ಅವರು ಇತ್ತೀಚೆಗೆ ಆರೋಪಿಸಿದ್ದರು.
ಇವರ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖಾಧಿಕಾರಿಗಳು ಆರೋಪಿಗಳ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments