HomeFresh Newsಉದ್ಯೋಗ ಆಕಾಂಕ್ಷಿಗಳಿಗೆ ಮೂರು ದಿನಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ

ಉದ್ಯೋಗ ಆಕಾಂಕ್ಷಿಗಳಿಗೆ ಮೂರು ದಿನಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ

ಕಟಪಾಡಿ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸರ್ಕಾರಿ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ಕಟಪಾಡಿ ರೋಟರಿ ಕ್ಲಬ್ ಹಾಗೂ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ವತಿಯಿಂದ ಮೂರು ದಿನಗಳ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.
ಅಕ್ಟೋಬರ್ 9ರಿಂದ 11ರವರೆಗೆ ಕಟಪಾಡಿಯ ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಬೇತಿ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ತರಬೇತಿ ನೀಡಲಾಗುತ್ತದೆ. ಭಾಗವಹಿಸುವ ಅಭ್ಯರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಬ್ಯಾಂಕಿಂಗ್ ಪರೀಕ್ಷೆಗಳು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ, ಪರೀಕ್ಷಾ ವಿಧಾನ, ಕಠಿಣ ಪ್ರಶ್ನೆಗಳನ್ನು ಸುಲಭವಾಗಿ ಪರಿಹರಿಸುವ ತಂತ್ರಗಳು, ಸಮಯ ನಿರ್ವಹಣೆ ಹಾಗೂ ವ್ಯಕ್ತಿತ್ವ ವಿಕಸನ ಕುರಿತು ತಜ್ಞರಿಂದ ಸಮಗ್ರ ಮಾರ್ಗದರ್ಶನ ನೀಡಲಾಗುತ್ತದೆ.
ಖ್ಯಾತ ಬ್ಯಾಂಕಿಂಗ್ ಪರೀಕ್ಷಾ ತರಬೇತುದಾರರು, ಲೇಖಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಆರ್.ಕೆ. ಬಾಲಚಂದ್ರ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಉಚಿತ ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಗೂಗಲ್ ಫಾರ್ಮ್ ಮೂಲಕ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ನಂಬರಿಗೆ ಸಂಪರ್ಕಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದರ್ಶನ್ ಮಲ್ಯ – 9845314234,
ಟಿ.ಆರ್. ದೊಡ್ಡಮನಿ – 7353657557,
ಲಕ್ಷ್ಮೀ – 9901108900

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments