HomeFresh Newsರಾಜ್ಯ ಜೂನಿಯರ್ ಅಥ್ಲೆಟಿಕ್ಸ್‌ನಲ್ಲಿ ಹೊಸ ದಾಖಲೆ ಬರೆದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಯುವರಾಜ್ ಡಿ.ಕುಂದರ್

ರಾಜ್ಯ ಜೂನಿಯರ್ ಅಥ್ಲೆಟಿಕ್ಸ್‌ನಲ್ಲಿ ಹೊಸ ದಾಖಲೆ ಬರೆದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಯುವರಾಜ್ ಡಿ.ಕುಂದರ್

ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 5ರಿಂದ ಅಕ್ಟೋಬರ್ 7ರವರೆಗೆ ನಡೆದ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಟ್ರೈಯಾಥ್ಲಾನ್ ಬಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.

ಯುವರಾಜ್ ಡಿ. ಕುಂದರ್ ಅವರು ಒಟ್ಟು 2,836 ಅಂಕಗಳನ್ನು ಗಳಿಸುವ ಮೂಲಕ ತಮ್ಮದೇ ಹಿಂದಿನ 2,632 ಅಂಕಗಳ ದಾಖಲೆಯನ್ನು ಮುರಿದು ಹೊಸ ಕೂಟದ ದಾಖಲೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿರುವ ಅವರು, ಚೆನ್ನೈನಲ್ಲಿ ನಡೆಯಲಿರುವ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ.ಯುವರಾಜ್ ಡಿ. ಕುಂದರ್ ಅವರ ಈ ಅಪೂರ್ವ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ವಂ.ಫಾ.ರೋಹನ್ ಡಿ’ಅಲ್ಮೇಡಾ ಎಸ್.ಜೆ. ಶ್ಲಾಘಿಸಿ,ಅಭಿನಂದಿಸಿದ್ದಾರೆ. ಉಪ ಪ್ರಾಂಶುಪಾಲರಾದ ಲಾರೆಲ್ ಡಿಸೋಜಾ, ಅಪರ್ಣಾ ಸುರೇಶ್ ಶಿಕ್ಷಕ
ವೃಂದ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂಬರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿಯೂ ಅವರು ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments