HomeFresh Newsಮಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ಮಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಮಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಸಿಹಿ ತಿಂಡಿ ಹಾಗೂ ತಿನಿಸುಗಳ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳ ಪರಿಶೀಲನೆಯ ಭಾಗವಾಗಿ, ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ಶನಿವಾರ ನಗರದಲ್ಲಿ ಕಾರ್ಯಾಚರಣೆ ನಡೆಸಿತು.

ನಗರದ ಫಳ್ನೀರ್ ಜಂಕ್ಷನ್‌ನಲ್ಲಿರುವ ಜಿ.ಐ. ಬೇಕರಿಯಲ್ಲಿ ಬೇಕರಿ ಉತ್ಪನ್ನಗಳನ್ನು ಮರುಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಈ ವೇಳೆ ಆಹಾರದ ಪ್ಯಾಕೆಟ್‌ಗಳ ಮೇಲೆ ತಯಾರಿಕಾ ದಿನಾಂಕ, ಬಳಕೆಯ ಅವಧಿ ಮುಕ್ತಾಯದ ದಿನಾಂಕ, ಬ್ಯಾಚ್ ಸಂಖ್ಯೆ ಹಾಗೂ ಎಫ್‌ಎಸ್‌ಎಸ್‌ಎಐ ಪರವಾನಗಿ ಸಂಖ್ಯೆಯಂತಹ ಅಗತ್ಯ ಮಾಹಿತಿಗಳು ಇಲ್ಲದ ಆಹಾರ ಉತ್ಪನ್ನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಮುದ್ರೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಆಹಾರ ಸುರಕ್ಷತಾ ನಿಯಮಗಳ ಪಾಲನೆ ಖಚಿತಪಡಿಸುವ ನಿಟ್ಟಿನಲ್ಲಿ ಈ ಪರಿಶೀಲನೆ ನಡೆಸಲಾಗಿದ್ದು, ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments