HomeFresh Newsಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ, ಅ. 23: ಉಡುಪಿ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯು ಅಕ್ಟೋಬರ್ 23ರಂದು ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು.
ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ಜಿಲ್ಲಾ ಕಾರಾಗೃಹದ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಕಾರಾಗೃಹದಲ್ಲಿನ ಮೂಲಭೂತ ಸೌಕರ್ಯಗಳು ಹಾಗೂ ಅವುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಎ. ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments