S I R ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಚ್ಚಿಲ ಗ್ರಾಮ ಸಮಿತಿಯ ವತಿಯಿಂದ ಉಚ್ಚಿಲ ಪೇಟೆಯಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ SDPI ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಮೂಳೂರು ಅವರು, SIR ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ SDPI ಉಚ್ಚಿಲ ಗ್ರಾಮ ಸಮಿತಿ ಅಧ್ಯಕ್ಷರಾದ ಮಜೀದ್ ಉಚ್ಚಿಲ, ಉಡುಪಿ ಜಿಲ್ಲಾ ಕಾರ್ಯದರ್ಶಿ ರಝಕ್ ವೈಸ್,ಕಾಪು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾದಿಕ್ ಕೆ.ಪಿ., ಉಪಾಧ್ಯಕ್ಷರಾದ ಇಬ್ರಾಹಿಂ ಹರ್ಶ್, ಇಬ್ರಾಹಿಂ ಕಂಚಿನಡ್ಕ ಜಿಲ್ಲಾ ಸಮಿತಿ ಸದಸ್ಯರು,ಕಾಪು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ತೌಫೀಕ್ ಉಚ್ಚಿಲ, wim ನ ಕಾಪು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರು ಅದ ಫರ್ಜನಾ, wim ಕಾರ್ಯದರ್ಶಿ ನಾಜ್ರಿನ ಕಾಪು,ಗ್ರಾಮ ಸಮಿತಿ ಉಪಾಧ್ಯಕ್ಷರಾದ ಶರೀಫ್ 313 ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು. ನೂರುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

