HomeFresh Newsಮುದರಂಗಡಿ ಪ್ರಜಾಸೇವಾ ಆಂದೋಲನ ಸಭೆ

ಮುದರಂಗಡಿ ಪ್ರಜಾಸೇವಾ ಆಂದೋಲನ ಸಭೆ

ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಉಡುಪಿ ವತಿಯಿಂದ ಇಂದು ದಿನಾಂಕ 24-10-2026 ರಂದು ಮುದರಂಗಡಿ ವಿದ್ಯಾನಗರ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಆಯೋಜಿಸಲಾದ “ಮುದರಂಗಡಿ ಪ್ರಜಾಸೇವಾ ಆಂದೋಲನ ಸಭೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 44 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಅಂನತ ಶಂಕರ್, ಸಹಾಯಕ ಪೋಲಿಸ್ ಅಧೀಕ್ಷಕರಾದ ಇಷಿತಾ ಗುಪ್ತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಮುದರಂಗಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಅರುಣ್, ಮುದರಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ವಿದ್ಯಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments