HomeFresh Newsಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

ಶ್ರೀ ಮಧ್ಯ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳ ಪೋಷಕರಿಗಾಗಿ ದಿನಾಂಕ 24 ಅಕ್ಟೋಬರ್ 2026 ರಂದು ಸಂಸ್ಥೆಯ ಆವರಣದಲ್ಲಿ ಶಿಕ್ಷಕ -ರಕ್ಷಕ ಸಭೆಯನ್ನು ಆಯೋಜಿಸಲಾಗಿತ್ತು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್ ಇವರು ಮಾತನಾಡಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರು ಮತ್ತು ಸಂಸ್ಥೆ ಎರಡಕ್ಕೂ ಸಮಾನ ಜವಾಬ್ದಾರಿ ಇದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಹೊಸ ಆಲೋಚನೆಗಳಿಗೆ ರೂಪ ನೀಡಲು ಮತ್ತು ಉದ್ಯಮಶೀಲತೆಯ ಬಗ್ಗೆ ತಿಳಿದಿಕೊಳ್ಳಲು ಕಾಲೇಜಿನ ಇನ್‌ಕ್ಯುಬೇಶನ್ ಕೇಂದ್ರವನ್ನು ಬಳಸಿಕೊಳ್ಳುವಂತೆ ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು ಮೊಬೈಲ್ ಪೋನ್‌ಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಬೇಕೆಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕರು ಮತ್ತು ಪ್ರೇರಣದಾಯಕ ಮಾತುಗಾರರಾದ ಶ್ರೀ ಆಲ್ವಿನ್ ದಾಂತಿ ಅವರು ಮಕ್ಕಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅವರನ್ನು ಉತ್ತಮ ರೀತಿಯಲ್ಲಿ ಬೆಳೆಸುವ ಕುರಿತು ಮಾತನಾಡಿದರು. ಇಂದಿನ ಪೀಳಿಗೆಯ ಮಕ್ಕಳ ಆಸಕ್ತಿ ಮತ್ತು ಆಲೋಚನೆಗಳನ್ನು ಪೋಷಕರು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು. ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡದೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಪ್ರೋತ್ಸಾಹಿಸುವುದು, ಮಕ್ಕಳೊಂದಿಗೆ ಹೆಚ್ಚು ಸಮಯವನ್ನು ಕಳೆಯುವುದು, ಅವರ ಮಾತುಗಳನ್ನು ತಾಳ್ಮೆಯಿಂದ ಆಲಿಸುವುದು ಮತ್ತು ಮುಕ್ತವಾಗಿ ಮಾತನಾಡಲು ಅವಕಾಶ ನೀಡುವುದು ಉತ್ತಮ ಪೋಷಕತ್ವದ ಮುಖ್ಯ ಭಾಗಗಳಾಗಿವೆ ಎಂದು ತಿಳಿಸಿದರು.

ಗಣಕಯಂತ್ರ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರಾದ ಶ್ರೀ ದೀಪಕ್ ಎಂ ರಾವ್ ಅವರು ಕಾಲೇಜಿನ ನಿರ್ವಹಣಾ ಮಾಹಿತಿ ವ್ಯವಸ್ಥೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಈ ವ್ಯವಸ್ಥೆಯ ಮೂಲಕ ವಿದ್ಯಾರ್ಥಿಗಳ ಹಾಜರಾತಿ, ಶೈಕ್ಷಣಿಕ ವರದಿಗಳು ಮತ್ತು ತರಗತಿಯ ವೇಳಾಪಟ್ಟಿಯನ್ನು ಹೇಗೆ ವೀಕ್ಷಿಸಬಹುದು ಎಂಬುದನ್ನು ವಿವರಿಸಿದರು. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಸುಲಭವಾಗಿ ಗಮನಿಸಲು ಸಾಧ್ಯವಾಗುತ್ತದೆ.

ಈ ಸಭೆಯಲ್ಲಿ ಡೀನ್‌ಗಳು ವಿವಿಧ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಭಾಗವಹಿಸಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments