ಕಾಪು ವಿಧಾನಸಭಾ ಕ್ಷೇತ್ರದ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 1 ಕೋಟಿ 80 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಹಾಗೂ 60 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ದಿನಾಂಕ 26-10-2026 ರಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್, ಬೆಳ್ಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜೇಂದ್ರ ಶೆಟ್ಟಿ, ಸುಧಾಕರ ಪೂಜಾರಿ, ದಿವ್ಯಾ ಆಚಾರ್ಯ, ಮಾಜಿ ಸದಸ್ಯರಾದ ಗುರುರಾಜ್ ಭಟ್, ಹರೀಶ್ ಶೆಟ್ಟಿ, ಅಶೋಕ್ ತೀರ್ಲಪಲ್ಕೆ, ಸ್ಥಳೀಯರಾದ ಭೋಜು ಪೂಜಾರಿ ಹಾಗೂ ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

