HomeFresh Newsಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ - ಸುರತ್ಕಲ್ ಬಂಟರ ಭವನದಲ್ಲಿ...

ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ – ಸುರತ್ಕಲ್ ಬಂಟರ ಭವನದಲ್ಲಿ ರಂಗು ರಂಗಿನ‌ ರಂಗೋತ್ಸವ

ಸುರತ್ಕಲ್ : ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ನವಂಬರ್ 1 ರಂದು ಸುರತ್ಕಲ್ ಬಂಟರ ಭವನದಲ್ಲಿ “ರಂಗು ರಂಗಿನ ರಂಗೋತ್ಸವ” ಕಾರ್ಯಕ್ರಮ ಮತ್ತು 2026 ನೇ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಹಿರಿಯ ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ನೀಡಿ ಗೌರವಿಸಲಾಯಿತು.


ಸಮಾರಂಭವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಿದರು.
ರಂಗಚಾವಡಿ ಸಂಸ್ಥೆ ನಿರಂತರವಾಗಿ ಕಲಾ ಸೇವೆ ಮಾಡುವುದರ ಜೊತೆಗೆ ಜಿಲ್ಲೆಯಲ್ಲಿರುವ ಕಲಾವಿದರನ್ನು ಗುರುತಿಸಿ ರಂಗಚಾವಡಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಜೊತೆಗೆ ಪರಿಸರದ ಜನರಿಗೆ ಮನರಂಜನೆಯನ್ನು ಒದಗಿಸ ಬೇಕೆಂಬ ನಿಟ್ಟಿನಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಇದರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ರಂಗಚಾವಡಿ ಸಂಸ್ಥೆಯ ಕಲಾ ಸೇವೆ ನಿರಂತರವಾಗಿ ನಡೆಯಲಿ ಎಂದು ಅವರು ಶುಭ ಹಾರೈಸಿದರು.


ಸಮಾರಂಭದಲ್ಲಿ 2026 ನೇ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ರಂಗ ಭೂಷಣ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಲಕ್ಷ್ಮಣ ಕುಮಾರ್ ಮಲ್ಲೂರು ಅವರು ರಂಗಚಾವಡಿ ಸಂಸ್ಥೆ ಅನೇಕ ವರ್ಷಗಳಿಂದ ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತೀವರ್ಷ ರಂಗೋತ್ಸವದ ಮೂಲಕ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಟೀಲು ಶ್ರೀ ಡೆವಲಪರ್ಸ್ ನ ಆಡಳಿತ ನಿರ್ದೇಶಕರಾದ ಗಿರೀಶ್ಎಂ ಶೆಟ್ಟಿ ಕಟೀಲು ಮಾತನಾಡಿ ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಕಲಾವಿದರನ್ನು ಬೆಳೆಸುವ ಮತ್ತು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದರು.


ವೇದಿಕೆಯಲ್ಲಿ ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಸಿ ಎ ಸುನೀಲ್ ಭಂಡಾರಿ ಬೆಂಗಳೂರು, ಚಲನ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಥಾಥ್೯ ಸೋಶಿಯಲ್ ನ ಸ್ಥಾಪಕಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ಚಾವಡಿಮನೆ ಜಗನ್ನಾಥ ಶೆಟ್ಟಿ, ಚಲನಚಿತ್ರ ನಿರ್ಮಾಪಕ ರವಿ ರೈ ಕಲಸ, ರಂಗಚಾವಡಿ ಸಂಸ್ಥೆಯ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು. ನ್ಯಾಯವಾದಿ ಶಶಿರಾಜ್ ಕಾವೂರು ಅಭಿನಂದನ ಭಾಷಣಗೈದರು. ಲಾವಣ್ಯ ಶೆಟ್ಟಿ ಚೇಳೈರು ಪ್ರಾರ್ಥಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.


ಬಳಿಕ ಸ್ಟಾರ್ ವಾಯ್ಸ್ ಮೆಲೊಡೀಸ್ ಇವರಿಂದ ಸಂಗೀತ ಗಾನಸುಧೆ ಹಾಗೂ ಕಲಾ ಸಂಗಮ‌ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರವರ ನೂತನ ಕೃತಿ “ಶ್ರೀಮತಿ ಸತ್ಯಭಾಮ” ನಾಟಕ ಉಚಿತ ಪ್ರದರ್ಶನಗೊಂಡಿತು.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments