HomeFresh Newsಆಳ್ವಾಸ್ ಪ.ಪೂ. ಕಾಲೇಜಿಗೆ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸಮಗ್ರ ಪ್ರಶಸ್ತಿ

ಆಳ್ವಾಸ್ ಪ.ಪೂ. ಕಾಲೇಜಿಗೆ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ದಕ್ಷಿಣ ಕನ್ನಡ ಹಾಗೂ ಸ್ವಸ್ತಿಶ್ರೀ ಜೈನ ವಸತಿ ಪದವಿಪೂರ್ವ ಕಾಲೇಜು, ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ ಗಳಿಸಿದೆ.


ಆಳ್ವಾಸ್ ಕಾಲೇಜು 32 ಚಿನ್ನ ಹಾಗೂ 30 ಬೆಳ್ಳಿ ಪದಕಗಳೊಂದಿಗೆ ಒಟ್ಟು 62 ಪದಕಗಳನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ 122 ಹಾಗೂ ಬಾಲಕಿಯರ ವಿಭಾಗದಲ್ಲಿ 116 ಅಂಕ ಗಳಿಸಿದ ಕಾಲೇಜು, ಒಟ್ಟು 238 ಅಂಕಗಳೊಂದಿಗೆ ಎರಡೂ ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Swarna jewellery -1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments