ಹೆಜಮಾಡಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಹೆಜಮಾಡಿಯಲ್ಲಿ ಆಯೋಜಿಸಲಾದ ಪಂಚ ಗ್ಯಾರಂಟಿ ಸಮಾರಂಭವು ಅದ್ದೂರಿಯಾಗಿ ನಡೆಯಿತು.
ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸುಧೀರ್ ಕುಮಾರ್ ಮರೋಳಿ ಪ್ರಮುಖ ಭಾಷಣ ಮಾಡಿದರು. ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳಿಂದ ಜನಸಾಮಾನ್ಯರ ಬದುಕಿನಲ್ಲಿ ಉಂಟಾದ ಸಕಾರಾತ್ಮಕ ಬದಲಾವಣೆಗಳ ಕುರಿತು ಕಾಂಗ್ರೆಸ್ ಮುಖಂಡರು ಮಾತನಾಡಿದರು.
ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಅಧ್ಯಕ್ಷ ವೈ. ಸುಕುಮಾರ್, ಪಡುಬಿದ್ರಿ ಕೋ-ಆಪ್ ಅಗ್ರಿಕಲ್ಚರ್ ಸೊಸೈಟಿ ಅಧ್ಯಕ್ಷ ವೈ. ಸುಧೀರ್ ಕುಮಾರ್, ಕೆಪಿಸಿಸಿ ಸಂಯೋಜಕ ಅಬ್ದುಲ್ ಅಜೀಜ್ ಹೆಜಮಾಡಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಸುಧೀರ್ ಕಾರ್ಕೇರ, ರಿಯಾ ವಿನುತಾ ಡಿ’ಸೋಜಾ, ಹಸನಬ್ಬ ಶೇಖ್ ಮತ್ತು ಕೀರ್ತಿ ಪ್ರಶಾಂತ್ ಜತ್ತಣ್ಣ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಹೆಜಮಾಡಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಕೇಶವ ಸಾಲಿಯಾನ್ ವಂದಿಸಿದರು. ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.


