HomeFresh Newsಕುಮ್ಕಿ, ಗೇರು ಲೀಸ್ ಭೂಮಿ, ಕಸ್ತೂರಿ ರಂಗನ್ ವರದಿ ಹಾಗೂ ಕಾಡುಪ್ರಾಣಿ ಹಾವಳಿ ಕುರಿತು ಮಣಿಪಾಲದ...

ಕುಮ್ಕಿ, ಗೇರು ಲೀಸ್ ಭೂಮಿ, ಕಸ್ತೂರಿ ರಂಗನ್ ವರದಿ ಹಾಗೂ ಕಾಡುಪ್ರಾಣಿ ಹಾವಳಿ ಕುರಿತು ಮಣಿಪಾಲದ ರಜತಾದ್ರಿಯಲ್ಲಿ ವಿಚಾರ ಸಂಕೀರ್ಣ

ಮಣಿಪಾಲ: ಕೃಷಿಕರ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲಾ ಕೃಷಿಕ ಸಮಾಜ ಹಾಗೂ ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘದ ಜಂಟಿ ಸಹಯೋಗದಲ್ಲಿ ನವೆಂಬರ್ 5ರಂದು ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ವಿಚಾರ ಸಂಕೀರ್ಣ ಆಯೋಜಿಸಲಾಯಿತು.


ಕುಮ್ಕಿ ಹಾಗೂ ಗೇರು ಲೀಸ್ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು, ಕಸ್ತೂರಿ ರಂಗನ್ ವರದಿಯ ಅನುಷ್ಠಾನ ಮತ್ತು ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಚಾರ ಸಂಕೀರ್ಣದಲ್ಲಿ ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕೃಷಿಕರ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ವಿಚಾರ ಸಂಕೀರ್ಣದಲ್ಲಿ ಗಮನ ಸೆಳೆಯಲಾಯಿತು.

Sudha Furniture - 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments