HomeFresh Newsಯುವ ಸಂಸತ್ತು ಸ್ಪರ್ಧೆ ಕು.ಸಾನಿಕ ಆಳ್ವ ರಾಜ್ಯ ಮಟ್ಟಕ್ಕೆ ಆಯ್ಕೆ

ಯುವ ಸಂಸತ್ತು ಸ್ಪರ್ಧೆ ಕು.ಸಾನಿಕ ಆಳ್ವ ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಗೆ ಮೂಡುಬಿದಿರೆ ಜೈನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು| ಸಾನಿಕ ಆಳ್ವ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ ಯುವ ಸಬಲೀಕರಣ ಹಾಗೂ ಶಾಲಾ ಶಿಕ್ಷಣ (ಪದವಿ ಪೂರ್ವ) ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ ನಡೆದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆ 2026 ಇದಾಗಿತ್ತು.

ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಇದೀಗ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಇವಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಚಾರ್ಯರು ಹಾಗೂ ಸಿಬ್ಬಂದಿಗಳು ಅಭಿನಂದನೆಯನ್ನು ತಿಳಿಸಿದ್ದಾರೆ ಇವಳು ಪಡುಕೋಣಾಜೆಯ ಜಯಪ್ರಸಾದ್ ಆಳ್ವ ಮತ್ತು ಬಾಲಿಕ ಜೈನ್ ದಂಪತಿಗಳ ಪುತ್ರಿ ಯಾಗಿದ್ದಾಳೆ.

Swarna jewellery - 4
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments