HomeFresh Newsಉಡುಪಿ : ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಉಡುಪಿ : ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಅಡಿಯಲ್ಲಿ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ತಂಡವು ನ.3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಪವನ್ ಕುಮಾರ್ (24) ಹಾಗೂ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದಿತ್ತು. ನ.5ರಂದು ಪವನ್ ಕುಮಾರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.ಪ್ರಕರಣದ ಉಳಿದ ಆರೋಪಿಗಳಾದ ವರಂಗ ಗ್ರಾಮದ ಮುನಿಯಾಲು ನಿವಾಸಿಗಳಾದ ಆದರ್ಶ ಕಾಂಚನ್ ಹಾಗೂ ದಿನೇಶ್ ಶೆಟ್ಟಿ ಎಂಬವರನ್ನು ನ.7ರ ರಾತ್ರಿ ಕಾರ್ಕಳದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಮತ್ತು ಸಿಬ್ಬಂದಿ ವಶಕ್ಕೆ ಪಡೆದು ಬಂಧಿಸಿದ್ದಾರೆ.

ಬಳಿಕ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments