ಪಡುಬಿದ್ರಿ:ಉಡುಪಿ ಜಿಲ್ಲೆಯ ಕಿದಿಯೂರು ನಿವಾಸಿ, 34 ವರ್ಷದ ಸಂದೇಶ್ ಅವರು ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಚಿಕಿತ್ಸೆಯ ವೆಚ್ಚ ಭರಿಸಲು ಆರ್ಥಿಕ ನೆರವು ಕೋರಿ ಶಿವಾಯ ಫೌಂಡೇಶನ್ಗೆ ಮನವಿ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ ಫೌಂಡೇಶನ್, ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಧನಸಂಗ್ರಹ ಅಭಿಯಾನವನ್ನು ಕೈಗೊಂಡಿತ್ತು.
ಆದರೆ ದುರದೃಷ್ಟವಶಾತ್, ಚಿಕಿತ್ಸೆ ಫಲಕಾರಿಯಾಗದೆ ಸಂದೇಶ್ ಅವರು ಇತ್ತೀಚಿಗೆ ನಿಧನರಾಗಿದ್ದರು. ಅವರ ಅಗಲಿಕೆಯಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಸಂದೇಶ್ ಅವರ ಚಿಕಿತ್ಸೆಯ ಉದ್ದೇಶಕ್ಕಾಗಿ ಸಂಗ್ರಹಿಸಲಾಗಿದ್ದ ನೆರವಿನ ಮೊತ್ತವನ್ನು ಮಾನವೀಯ ನೆಲೆಯಲ್ಲಿ ಅವರ ಕುಟುಂಬದ ಸದಸ್ಯರಿಗೆ ಇಂದು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ನವೀನ್ ಚಂದ್ರ ಜೆ. ಶೆಟ್ಟಿ, ಗೌ. ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಶೆಟ್ಟಿ ಪಂಜ, ರವಿ ಶೆಟ್ಟಿ ಪಾದೆಬೆಟ್ಟು, ಪ್ರಕಾಶ್ ಶೆಟ್ಟಿ ಪಡುಹಿಟ್ಲು, ವಿಶ್ವಾಸ್ ಅಮೀನ್, ಮಿಥುನ್ ಶೆಟ್ಟಿ ಪದ್ರ, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


