ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾದ ಜನತಂತ್ರ ಸಂರಕ್ಷಣಾ ಪಾದಯಾತ್ರೆಗೆ ಅದ್ಧೂರಿ ಚಾಲನೆ ನೀಡಲಾಯಿತು. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಪ್ರೊ. ಎನ್. ನಾಗರಾಜ್ ಅವರು ಪಾದಯಾತ್ರೆಯನ್ನು ಉದ್ಘಾಟಿಸಿದರು.
ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಎಂ. ವೆಂಕಟೇಶನ್, ಚಾತ್ತನ್ನೂರು ಶಾಸಕ ಬಿ.ಬಿ. ಗೋಪಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ಎಸ್. ಸುರೇಶ್, ರಾಜ್ಯ ಸೆಲ್ ಸಂಯೋಜಕ ಅಡ್ವೊಕೇಟ್ ವಿ.ಕೆ. ಸಜೀವನ್, ರಾಷ್ಟ್ರೀಯ ಪರಿಷತ್ ಸದಸ್ಯ ಎಂ. ಸಂಜೀವ ಶೆಟ್ಟಿ, ಕಣ್ಣೂರು ವಿಭಾಗದ ಅಧ್ಯಕ್ಷ ಅಡ್ವೊಕೇಟ್ ಕೆ. ಶ್ರೀಕಾಂತ್ ಹಾಗೂ ವಿಭಾಗದ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಎನ್. ಬಾಬುರಾಜ್, ಮನುಲಾಲ್ ಮೇಲತ್, ವಿಭಾಗದ ಉಪಾಧ್ಯಕ್ಷ ವಿಜಯಕುಮಾರ್ ರೈ, ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಅಡ್ವೊಕೇಟ್ ವಿ. ಬಾಲಕೃಷ್ಣ ಶೆಟ್ಟಿ, ಸುರೇಶ್ ಕುಮಾರ್ ಶೆಟ್ಟಿ, ರವೀಶ ತಂತ್ರಿ ಕುಂಟಾರು, ಸತೀಶ್ ಚಂದ್ರ ಭಂಡಾರಿ, ಸವಿತಾ, ಪ್ರಮೀಳಾ ಸಿ. ನಾಯಕ್, ಎ. ವೇಲಾಯುಧನ್, ರಾಮಪ್ಪ ಮಂಜೇಶ್ವರ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.



ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಜನತಂತ್ರ ಸಂರಕ್ಷಣಾ ಪಾದಯಾತ್ರೆಗೆ ಚಾಲನೆ ದೊರೆಯಿತು.

