HomeFresh Newsಪಡುಬಿದ್ರಿಯಲ್ಲಿ ನ.14ರಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಂಭ್ರಮ

ಪಡುಬಿದ್ರಿಯಲ್ಲಿ ನ.14ರಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಂಭ್ರಮ

ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.), ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನವೆಂಬರ್ 14ರಿಂದ 20ರವರೆಗೆ ಪಡುಬಿದ್ರಿಯಲ್ಲಿ ಆಯೋಜಿಸಲಾಗಿದೆ.


“ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಉತ್ತಮ ಪಾಲುದಾರ, ತಂತ್ರಜ್ಞಾನ, ಕೌಶಲ್ಯಾಧಾರಿತ ಮತ್ತು ವೈವಿಧ್ಯಮಯ ಸೇವೆ” ಎಂಬ ಆಶಯದೊಂದಿಗೆ ಏಳು ದಿನಗಳ ಕಾಲ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಚಾರ ಸಂಕಿರಣ, ಕಾರ್ಯಾಗಾರ ಹಾಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.
ನ.15ರಂದು ಗಣಕೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣದ ಕುರಿತು ಕಾರ್ಯಕ್ರಮ, ನ.16ರಂದು ಶಾಲಾ ವಿದ್ಯಾರ್ಥಿಗಳಿಗೆ ಸಹಕಾರದ ಬಗ್ಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ನ.17ರಂದು ಸಂತಾನ ಸಮಸ್ಯೆಗೆ ಉಚಿತ ಸಮಾಲೋಚನಾ ಶಿಬಿರ ಹಾಗೂ ಆರೋಗ್ಯ ಸಂಬಂಧಿತ ಕಾರ್ಯಕ್ರಮ ಆಯೋಜಿಸಲಾಗಿದೆ.


ನ.18ರಂದು ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ ಮತ್ತು ಖಾಸಗಿ ಸಹಕಾರಿ ಪಾಲುದಾರಿಕೆಯನ್ನು ಬಲಪಡಿಸುವ ಕುರಿತ ಕಾರ್ಯಕ್ರಮದ ಜೊತೆಗೆ ರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಪಡುಬಿದ್ರಿಯ ವೈ. ಲಕ್ಷ್ಮಣ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮ ಜರುಗಲಿದೆ.ನ.19ರಂದು ಅಂಗನವಾಡಿ ಕೇಂದ್ರದ ಗೋಡೆ ಬರಹಕ್ಕಾಗಿ ಸಹಾಯಧನ ಹಸ್ತಾಂತರ ಕಾರ್ಯಕ್ರಮವನ್ನು ಅಂಗನವಾಡಿ ಕೇಂದ್ರ, ಹೆಜಮಾಡಿ ಕೋಡಿಯಲ್ಲಿ ಆಯೋಜಿಸಲಾಗಿದೆ.
ನ.20ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ಕಾರ್ಯಕ್ರಮವಿದೆ.
ಸಹಕಾರ ಕ್ಷೇತ್ರದ ಆಧುನೀಕರಣ, ಡಿಜಿಟಲೀಕರಣ, ಶಿಕ್ಷಣ, ತರಬೇತಿ, ಮೌಲ್ಯವರ್ಧನೆ, ರೈತರ ಆರ್ಥಿಕ ಸಬಲೀಕರಣ ಹಾಗೂ ಮಹಿಳೆಯರು ಮತ್ತು ಯುವಜನರ ಪಾಲ್ಗೊಳ್ಳುವಿಕೆಗೆ ಒತ್ತು ನೀಡುವ ಮೂಲಕ ಸಹಕಾರ ಚಳವಳಿಯನ್ನು ಮತ್ತಷ್ಟು ಬಲಪಡಿಸುವುದು ಸಪ್ತಾಹದ ಉದ್ದೇಶಿಸಲಾಗಿದ್ದು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಶ್ರೀ ವೈ ಸುಧೀರ್ ಕುಮಾರ್ ಅಧ್ಯಕ್ಷರು, ಶ್ರೀ ಗುರುರಾಜ್ ಪೂಜಾರಿ ಉಪಾಧ್ಯಕ್ಷರು, ಶ್ರೀಮತಿ ನಿಶ್ಚಿತಾ ಪಿ.ಎಚ್ ಮುಖ್ಯ ಕಾರ್ಯ
ನಿರ್ವಹಣಾಧಿಕಾರಿ ಹಾಗೂ ನಿರ್ದೇಶಕರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Sudha Furniture - 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments