HomeFresh Newsಎಚ್.ಡಿ. ಕುಮಾರಸ್ವಾಮಿ ನ.16ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಎಚ್.ಡಿ. ಕುಮಾರಸ್ವಾಮಿ ನ.16ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು: ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ನವೆಂಬರ್ 16ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ನವೆಂಬರ್ 15ರಂದು ಸಂಜೆ 7:30ಕ್ಕೆ ಕೊಲ್ಲೂರಿಗೆ ಆಗಮಿಸಲಿರುವ ಅವರು, ಅಲ್ಲಿನ ದೇವಸ್ಥಾನದ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 16ರಂದು ಬೆಳಿಗ್ಗೆ 6:15ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದಾರೆ.ಬಳಿಕ ಮಧ್ಯಾಹ್ನ 12 ಗಂಟೆಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆಯಲಿದ್ದು, ನಂತರ ಕಾಪುವಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.


ಈ ಕುರಿತು ಉಡುಪಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments