ಇನ್ನಂಜೆ: ನ.14: ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಒಟ್ಟು 1 ಕೋಟಿ 5 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.
ಶಾಸಕರ ಶಿಫಾರಸ್ಸಿನ ಮೇರೆಗೆ 55 ಲಕ್ಷ ರೂಪಾಯಿ ಅನುದಾನದಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು, 50 ಲಕ್ಷ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡ ಮುಡುಂಬು–ಅಜಿಲಕಾಡು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು.
ಗುದ್ದಲಿ ಪೂಜೆ ನೆರವೇರಿದ ಪ್ರಮುಖ ಕಾಮಗಾರಿಗಳು:
ಉಂಡಾರು ಜಾನಕಿ ಕುಲಾಲ್ ಅವರ ಮನೆ ಬಳಿ ರಸ್ತೆ ಹಾಗೂ ಸೇತುವೆ ನಿರ್ಮಾಣ – ₹20 ಲಕ್ಷ
ಮುಡುಂಬು ಶ್ರೀ ಮಹಾಗಣಪತಿ ದೇವಸ್ಥಾನದ ಅಭಿವೃದ್ಧಿ – ₹5 ಲಕ್ಷ
ಕಲ್ಯಾಲು ಶಿವ ಆಚಾರ್ಯ ಅವರ ಮನೆ ಬಳಿ ರಸ್ತೆ ಅಭಿವೃದ್ಧಿ – ₹5 ಲಕ್ಷ
ಪಾಂಗಾಳ 1ನೇ ವಾರ್ಡ್‌ನಲ್ಲಿ ಗೋಪಾಲ ಪೂಜಾರಿ ಅವರ ಮನೆಯಿಂದ ಮೀರಾ ಶೆಟ್ಟಿ ಅವರ ಮನೆವರೆಗೆ ರಸ್ತೆ ಅಭಿವೃದ್ಧಿ – ₹20 ಲಕ್ಷ
ಪಾಂಗಾಳ 1ನೇ ವಾರ್ಡ್‌ನಲ್ಲಿ ಕೊಟ್ಟಾರಿ ಮನೆಯಿಂದ ಶ್ರೀಧರ್ ಅಮೀನ್ ಅವರ ಮನೆವರೆಗೆ ರಸ್ತೆ ಅಭಿವೃದ್ಧಿ – ₹5 ಲಕ್ಷ
ಒಟ್ಟು 55 ಲಕ್ಷ ರೂಪಾಯಿ ವೆಚ್ಚದ ಈ ಕಾಮಗಾರಿಗಳಿಂದ ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಬಲ ದೊರೆಯಲಿದೆ.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಮಾಜಿ ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಬಿಜೆಪಿ ಮಂಡಲ ಕಾರ್ಯದರ್ಶಿ ಕೇಸರಿ ಯುವರಾಜ್, ಇನ್ನಂಜೆ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪಾಂಗಾಳ, ಮಾಜಿ ಸದಸ್ಯರಾದ ದಿವೇಶ್ ಶೆಟ್ಟಿ, ನಿತೇಶ್ ಸಾಲಿಯಾನ್, ಸವಿತಾ ಶೆಟ್ಟಿ, ಸುಭಾಸ್ ಚಂದ್ರ ಅಮೀನ್, ಮುಡುಂಬು ಶ್ರೀ ಮಹಾಗಣಪತಿ ದೇವಸ್ಥಾನದ ಜನಾರ್ದನ ಭಟ್, ವಾರ್ಡ್ ಅಧ್ಯಕ್ಷರಾದ ಶೈಲೇಶ್ ಶೆಟ್ಟಿ ಪಾಂಗಾಳ, ರಾಜೇಶ್ ಕುಲಾಲ್, ವಿಶ್ವನಾಥ್ ಆಚಾರ್ಯ, ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನ್ ಅಮೀನ್ ಶಂಕರಪುರ, ಲಕ್ಷ್ಮಣ ಪೂಜಾರಿ, ರವಿ ಆಚಾರ್ಯ, ಸುಧಾಕರ್ ಪೂಜಾರಿ ಸೇರಿದಂತೆ ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ₹1.05 ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಚಾಲನೆ
RELATED ARTICLES

