ಕೊಕ್ಕಡ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮಂಗಳವಾರದಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಸಚಿವರು, ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಹಾಗೂ ಸಮಿತಿ ಸದಸ್ಯೆ ಲೋಕೇಶ್ವರಿ ಅವರು ಸಚಿವರು ಮತ್ತು ಕುಟುಂಬದ ಸದಸ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶಾಲು ಹೊದಿಸಿ ಗೌರವಿಸಿದರು.


