ಶಿರ್ವ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಹಾಗೂ ಶಿರ್ವ ಹಿಂದೂ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಕಳತ್ತೂರು ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ – ಕಲೋತ್ಸವ’ ಕಾರ್ಯಕ್ರಮ ಬುಧವಾರ ಶಿರ್ವ ಹಿಂದೂ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.
ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಬೆಳೆಸಲು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳ ಸದುಪಯೋಗ ಪಡೆದುಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಸಂಪನ್ನ
RELATED ARTICLES

