ಮೂಡುಬಿದಿರೆ: ಇಲ್ಲಿನ ವಿದ್ಯಾಗಿರಿಯ ಗಾಂಧಿನಗರದಲ್ಲಿ ಮಂಗಳವಾರ ಬೆಳಿಗ್ಗೆ ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸಹ ಸವಾರ ಸಾವನ್ನಪ್ಪಿದ್ದಾರೆ.
ಮಿಜಾರು ಮರಕಡ ನಿವಾಸಿ ಚಂದು ( 26) ಸಾವನ್ನಪ್ಪಿದ ಯುವಕ.

ವಿದ್ಯಾಗಿರಿ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಬೈಕ್‌ಗೆ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಗೂಡ್ಸ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಬೈಕ್ ಸಹ ಸವಾರ ಚಂದು ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿಸಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬೈಕ್ ಸವಾರ ಉದಯ್ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


