ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆ, ಮಂಗಳೂರಿನ ಎಂಟನೇ ತರಗತಿಯ ವಿದ್ಯಾರ್ಥಿ ತಕ್ಷಕ್ ಮಹೇಶ್ ಶೆಟ್ಟಿ ಅವರು 5ನೇ ಮಿನಿ ಕರ್ನಾಟಕ ರಾಜ್ಯ ಕ್ರೀಡಾಕೂಟ 2026ರಲ್ಲಿ ಬಾಸ್ಕೆಟ್ಬಾಲ್ ವಿಭಾಗದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನವೆಂಬರ್ 14ರಿಂದ 21ರವರೆಗೆ ನಡೆದ ಈ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ತಕ್ಷಕ್ ಅವರು ಬೆಂಗಳೂರು ವ್ಯಾಂಗ್ವಾರ್ಡ್ಸ್ (Bangalore Vanguards) ತಂಡದ ಸದಸ್ಯರಾಗಿ ಭಾಗವಹಿಸಿ, ತಂಡವು ಪ್ರಥಮ ರನ್ನರ್ ಅಪ್( First runner up)ಸ್ಥಾನ ಪಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದರು.

ಕರ್ನಾಟಕ ಒಲಿಂಪಿಕ್ ಸಂಸ್ಥೆಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಈ ಪ್ರತಿಷ್ಠಿತ ಕ್ರೀಡಾಕೂಟವನ್ನು ಆಯೋಜಿಸಿತ್ತು. ಈ ಕ್ರೀಡಾಕೂಟದಲ್ಲಿ ತಕ್ಷಕ್ ಅವರ ಭಾಗವಹಿಸುವಿಕೆ ಅವರ ಕ್ರೀಡಾ ಪ್ರತಿಭೆ, ಪರಿಶ್ರಮ, ಸಮರ್ಪಣೆ ಹಾಗೂ ತಂಡದೊಂದಿಗೆ ಹೊಂದಾಣಿಕೆಯಿಂದ ಆಡುವ ಮನೋಭಾವವನ್ನು ಪ್ರತಿಬಿಂಬಿಸುತ್ತದೆ.
ತಕ್ಷಕ್ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಪ್ರಾಂಶುಪಾಲರಾದ ವಂ.ಫಾ. ರೋಹನ್ ಡಿ ಅಲ್ಮೇಡಾ ಎಸ್. ಜೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಪ ಪ್ರಾಂಶುಪಾಲರು, ಶಿಕ್ಷಕ ಶಿಕ್ಷಕೇತರ ವೃಂದ ಅವರ ಮುಂದಿನ ಕ್ರೀಡಾ ಪಯಣಕ್ಕೆ ಶುಭ ಹಾರೈಸಿದ್ದಾರೆ.

