HomeFresh Newsಗುಂಡ್ಯ: ಪಿಕಪ್ ಡಿಕ್ಕಿ; ಈಚರ್ ಲಾರಿ ಚಾಲಕನಿಗೆ ಗಂಭೀರ ಗಾಯ

ಗುಂಡ್ಯ: ಪಿಕಪ್ ಡಿಕ್ಕಿ; ಈಚರ್ ಲಾರಿ ಚಾಲಕನಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಈಚರ್ ಲಾರಿ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಈಚರ್ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.

ಗಾಯಗೊಂಡ ಚಾಲಕನನ್ನು ಕಲ್ಲೇರಿ ಸಮೀಪದ ಬಾರ್ಯ ನಿವಾಸಿ ಚಂದ್ರ(51) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಅಡಿಕೆ ಸಾಗಿಸುತ್ತಿದ್ದ ಈಚರ್ ಲಾರಿಗೆ, ಕೆ.ಆರ್. ನಗರದಿಂದ ಮಂಗಳೂರಿಗೆ ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಪಿಕಪ್ ಗುಂಡ್ಯ ಎಂಬಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನ ಪಲ್ಟಿಯಾಗಿದ್ದು, ಅದರಲ್ಲಿದ್ದ ಕಲ್ಲಂಗಡಿ ಹಣ್ಣುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಅಪಘಾತದಲ್ಲಿ ಈಚರ್ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪಿಕಪ್ ಚಾಲಕ ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಅಪಘಾತದಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments