HomeFresh Newsರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ

ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ

ಕಿನ್ನಿಗೋಳಿ:ರೋಟರಿ ಆಂಗ್ಲ ಮಾಧ್ಯಮ ಶಾಲೆ, ಕಿನ್ನಿಗೋಳಿ ಇದರ ವಾರ್ಷಿಕ ಕ್ರೀಡಾಕೂಟವು ಮುಂಡ್ಕೂರು ವಿಪಿ ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದ ಪಥಸಂಚಲನಕ್ಕೆ ಕರ್ನಾಟಕ ಬ್ಯಾಂಕ್‌ನ ಮ್ಯಾನೇಜರ್ ಶ್ರೀ ಶಶಿಕಿರಣ್ ಕೆ. ಚಾಲನೆ ನೀಡಿದರು. ಧ್ವಜಾರೋಹಣವನ್ನು ಕೆನರಾ ಬ್ಯಾಂಕ್‌ನ ಮ್ಯಾನೇಜರ್ ಶ್ರೀ ಸುರೇಶ್ ಅಮೀನ್ ಅವರು ನೆರವೇರಿಸಿ , ವಿದ್ಯಾರ್ಥಿ ಜೀವನದಲ್ಲಿ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುವುದು ಒಂದು ಸೌಭಾಗ್ಯ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಕ್ರೀಡೆಯಿಂದ ಕಲಿಯುವ ಶಿಸ್ತು, ಸಮಯಪ್ರಜ್ಞೆ, ತಂಡದ ಮನೋಭಾವ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾಕೂಟವನ್ನು ಶ್ರೀಮತಿ ಪೂರ್ಣಿಮಾ ಸಾಯಿನಾಥ್ ಶೆಟ್ಟಿ ಅವರು ಉದ್ಘಾಟಿಸಿದರು.

ತಮ್ಮ ಉದ್ಘಾಟನಾ ಭಾಷಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಮುಂಡ್ಕೂರು ವಿದ್ಯಾಸಂಸ್ಥೆಯ ನಡುವಿನ ಉತ್ತಮ ಬಾಂಧವ್ಯವನ್ನು ಸ್ಮರಿಸಿದ ಅವರು, ಇಂದಿನ ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಮಹತ್ತರವಾದುದು. ದೈಹಿಕ ಮತ್ತು ಮಾನಸಿಕ ಆರೋಗ್ಯ, ಶಿಸ್ತು, ಆತ್ಮವಿಶ್ವಾಸ ಹಾಗೂ ಸಹಕಾರ ಮನೋಭಾವವನ್ನು ಬೆಳೆಸುವಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪ್ರವೀಣ್ ಸಾಲ್ಯಾನ್ ರವರು ವಹಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾವರ್ಧಕ ಪಿಯು ಕಾಲೇಜಿನ ಅಧ್ಯಕ್ಷರಾದ ಶ್ರೀ ಸುಧಾಕರ್ ಶೆಟ್ಟಿ, , ಲಯನ್ಸ್ ಕ್ಲಬ್ ಮುಂಡ್ಕೂರಿನ ಮಾಜಿ ಅಧ್ಯಕ್ಷರಾದ ಶ್ರೀ ಅಶೋಕ್ ಶೆಟ್ಟಿ, ವಿದ್ಯಾವರ್ಧಕ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಡಾ. ಪ್ರಭಾಕರ ಶೆಟ್ಟಿಗಾರ್, ಮುಂಡ್ಕೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಅರುಣ್ ರಾವ್, ಪ್ರಕಾಶ್ ಸಪಳಿಗ ,ವಿದ್ಯಾವರ್ಧಕ ವಿದ್ಯಾಸಂಸ್ಥೆಯ ರಾಜ್ಯಶಾಸ್ತ್ರ ವಿಷಯದ ಪ್ರಾಚಾರ್ಯ ಶ್ರೀ ಶಾಂತರಾಮ್ ವಾಗ್ಲಾ ಹಾಗೂ ವಿದ್ಯಾವರ್ಧಕ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸವಿತಾರವರು ಉಪಸ್ಥಿತರಿದ್ದರು.

ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ಶರತ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಶ್ರೀ ಸ್ವರಾಜ್ ಶೆಟ್ಟಿ ಹಾಗೂ ಸದಸ್ಯರಾದ ಶ್ರೀ ಸಾಯಿನಾಥ್ ಶೆಟ್ಟಿ ,ಶ್ರೀ ಹರೀಶ್ ಶೆಟ್ಟಿ ಮತ್ತು ಶ್ರೀ ಮೆಲ್ವಿನ್ ಡಿಕುನ್ಹಾ, ರೋಟರಿ ಕ್ಲಬ್ ನ ಕಾರ್ಯದರ್ಶಿ ಶ್ರೀ ಸದಾಶಿವ ನಾಯಕ್, ಪ್ರವೀಣ್ ರೊಡ್ರಿಗಸ್, ಶಿಕ್ಷಕರ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸಾಧನಾ ವೈಲೆಟ್ ಬ್ಯಾಸೋ, ಹಳೇವಿಧ್ಯಾರ್ಥಿ ಸಂಘದ ಉಪಾಧ್ಯಕ್ಷ ಜೋಯಲ್ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕಿ ವಿಂದ್ಯಾ ಶಿಕ್ಷಕ ಶಿಕ್ಷಕೇತರರು ಪೋಷಕರು ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

ಕ್ರೀಡಾಮಂತ್ರಿ ಯಶ್ವಿನ್ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು.
ಮುಖ್ಯ ಶಿಕ್ಷಕಿ ಶ್ರೀಮತಿ ಸುನಿತಾ ಗುರುರಾಜ್ ಅವರು ಗಣ್ಯರನ್ನು ಹಾಗೂ ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಸರಿತಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ನಯನಾ ಅವರು ವಂದನಾರ್ಪಣೆ ಸಲ್ಲಿಸಿದರು.

Swarna jewellery -1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments