HomeFresh Newsಕಾರು ಹತ್ತಿಸಿ ಕೊಲೆ: ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷ ಸೆರೆ

ಕಾರು ಹತ್ತಿಸಿ ಕೊಲೆ: ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷ ಸೆರೆ

ಕುಂದಾಪುರ: ಯಡಮೊಗೆ ಸಾಮಾಜಿಕ‌ ಕಾರ್ಯಕರ್ತನ ಮೇಲೆ ಕಾರು ಹತ್ತಿಸಿ ಕೊಲೆಗೈದ ಖೇದಕರ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪಂಚಾಯತ್ ಅಧ್ಯಕ್ಷನನ್ನು ಶಂಕರನಾರಾಯಣ ಪೊಲೀಸರು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶನಿವಾರ ರಾತ್ರಿ ಸಾಮಾಜಿಕ‌ ಕಾರ್ಯಕರ್ತ ಉದಯ್ ಗಾಣಿಗ (45) ಎಂಬವರ ಮೇಲೆ ಅವರ ಮನೆ ಎದುರಿನ‌ ರಸ್ತೆಯಲ್ಲೇ ಕಾರು ಹರಿಸಿ ಅವರನ್ನು ಕೊಲೆಗೈಯ್ಯಲಾಗಿತ್ತು. ಉದಯ್ ಪತ್ನಿ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ‌ ಶಂಕರನಾರಾಯಣ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ ಕ್ಷಿಪ್ರಗತಿಯಲ್ಲಿ ಆರೋಪಿ ಪ್ರಾಣೇಶ್ ಯಡಿಯಾಳ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದು ತನಿಖೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಯಾವ ಕಾರಣಕ್ಕೆ ಕೊಲೆಗೈಯ್ಯಲಾಗಿದೆ ಎಂಬಿತ್ಯಾದಿ ಅಂಶಗಳು ಪೊಲೀಸ್‌ ತನಿಖೆ ಇಂದಷ್ಟೇ ಬೆಳಕಿಗೆ ಬರಬೇಕಿದೆ.
ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಹಾಗೂ ಉದಯ್ ಮಧ್ಯೆ ಕೊಳವೆ ಬಾವಿಗೆ ಸಂಬಂಧಿಸಿ ಎನ್ಓಸಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಸಾಕಷ್ಟು ಕಿರಿಕಿರಿ ಮಾಡಿ ಎನ್ಓಸಿ ಕೊಡಲಾಗಿತ್ತು. ಆ ಬಳಿಕ ಪ್ರಾಣೇಶ್ ಯಡಿಯಾಳ ಹಾಗೂ ಬಾಲಚಂದ್ರ ಭಟ್ ಜೊತೆಗೂಡಿ ಉದಯ್ ಅವರೊಂದಿಗೆ ಗಲಾಟೆ ನಡೆಸಿ ಬೆದರಿಕೆ ಹಾಕಿದ್ದರು ಎಂದು ಅವರ ಪತ್ನಿ ದೂರಿನಲ್ಲಿ ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments