HomeFresh Newsಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ ಕಾರ್ಮಿಕರು ತಮ್ಮನ್ನು ನೇರ ನೇಮಕಾತಿ ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ.

ಇದಕ್ಕೆ ಬೆಂಬಲವಾಗಿ ನಿಂತಿದ್ದೇವೆ. ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿ 700 ಮಂದಿಗೆ ಒಬ್ಬರಂತೆ ಪೌರಕಾರ್ಮಿಕರು ಇರಭೇಕಾಗಿದೆ. ಹೊರಗುತ್ತಿಗೆ ಯಲ್ಲಿ ಪಡೆದುಕೊಂಡರೆ ಆರ್ಥಿಕ ಹೊರೆಯಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರವೇ ನೇರ ನೇಮಕಾತಿ ಮಾಡಿದಲ್ಲಿ ಸಹಕಾರಿಯಾಗಲಿದೆ ಎಂದರು. ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಭಾಮಿ ಅಶೋಕ ಶೆಣೈ ಅವರು ಪೌರಕಾರ್ಮಿಕರ ನೇರನೇಮಕಾತಿ ಮಾಡುವಂತೆ ಶಿಫಾರಸ್ಸು ಮಾಡಬೇಕು. ಅಲ್ಲದೆ ಅವರಿಗೆ ನಗರಸಭಾ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿ ಕೊಡುವ ಬಗ್ಗೆಯೂ ಚಿಂತನೆ ನಡೆಸಬೇಕು ಎಂದರು.


ಸಭೆಯಲ್ಲಿ ಚರಂಡಿ ಹೂಳೆತ್ತುವಿಕೆ ಸೇರಿದಂತೆ ವಿವಿಧ ಕಾಮಗಾರಿಹಳಿಗೆ ಘಟನೋತ್ತರ ಮಂಜೂರಾತಿ ನೀಡಲಾಯಿತು. ವೇದಿಕೆಯಲ್ಲಿ ಪೌರಾಯುಕ್ತ ಮಧು ಎಸ್.ಎಮ್, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments