ಡಾ. ಎನ್ ಎಸ್ ಎಎಂ ಪಿಯು ಕಾಲೇಜಿನಲ್ಲಿ ಯೋಗ ದಿನಾಚರಣೆ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳೂರಿನ ಡಾ. ಎನ್‌ಎಸ್‌ಎಎಂ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜು ಮತ್ತು ಕಾಲೇಜಿನ ಎನ್‌ಎಸ್‌ಎಸ್ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹಲವಾರು ಮಂದಿ ಯೋಗ ಪ್ರದರ್ಶನ ನಡೆಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯ ಶಿಕ್ಷಕ ಜನಾರ್ದನ್, ಪ್ರಧಾನಿ ನರೇಂದ್ರ ಮೋದಿಯ ಆಶಯದಂತೆ ಪ್ರತೀ ವರ್ಷವೂ ಯೋಗ ದಿನಾಚರಣೆಯನ್ನು ಮಾಡಲಾಗುತ್ತದೆ. ಇದರಿಂದಾಗಿ ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯವಾಗಿ ಮನ್ನಣೆ ಪಡೆಯಲು ಸಾಧ್ಯವಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಶೆಟ್ಟಿ ಮಾತನಾಡಿ, ಯೋಗವು ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಿಲ್ಲಿ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಬಂದು ಭುಜಂಗ ರಾವ್, ಮನಸ್ವಿ , ಮೀರ ಮೀರಾ ಫ್ಲಾರೆನ್ಸ್ ಕ್ರಾಸ್ತ, ಸಂಧ್ಯಾ, ಶ್ರುತಿ ಉಪಸ್ಧಿತರಿದ್ದರು.


















