ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು.

ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಿಶ್ವನಾಥ ಶೆಟ್ಟಿ, ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
