HomeFresh Newsಬಕ್ರೀದ್ ಆಚರಣೆ ಹಿನ್ನೆಲೆ: ಮುಂಜಾಗ್ರತಾ ಕ್ರಮವಾಗಿ ಚೆಕ್ ಪೋಸ್ಟ್: ಪೊಲೀಸ್ ಕಮಿಷನರ್ ಶಶಿಕುಮಾರ್

ಬಕ್ರೀದ್ ಆಚರಣೆ ಹಿನ್ನೆಲೆ: ಮುಂಜಾಗ್ರತಾ ಕ್ರಮವಾಗಿ ಚೆಕ್ ಪೋಸ್ಟ್: ಪೊಲೀಸ್ ಕಮಿಷನರ್ ಶಶಿಕುಮಾರ್

ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯ ಪ್ರತಿಯೊಂದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲದೆ ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಗಡಿ ಭಾಗಗಳಲ್ಲಿ ಕೂಡಾ ಚೆಕ್ ಪೋಸ್ಟ್ ತೆರೆದು ಶಾಂತಿಯುತವಾಗಿ ಬಕ್ರೀದ್ ಆಚರಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.ಈಗಾಗಲೇ ಎಲ್ಲಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಧರ್ಮಗಳ ಪ್ರಮುಖರ ಸಮ್ಮುಖದಲ್ಲಿ ಶಾಂತಿಸಭೆ ನಡೆಸಲಾಗಿದೆ. ಧಾರ್ಮಿಕ ಕೇಂದ್ರಗಳ ಸುತ್ತ ಮುತ್ತ ಬಂದೋಬಸ್ತ್ ಮಾಡಲಾಗಿದೆ. ಸರಕಾರದ ಸೂಚನೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಈದ್ಗಾಗಳಲ್ಲಿ ಪ್ರಾರ್ಥನೆ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕಮಿಷನರ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments