HomeFresh Newsಬೆಳ್ತಂಗಡಿಯಲ್ಲಿ ಬಿಜೆಪಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿಯಲ್ಲಿ ಬಿಜೆಪಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಕೋವಿಡ್ನ 2 ನೆ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ದೇಶ ಅಂದರೆ ಅದು ನರೇಂದ್ರ ಮೋದಿ ಸರಕಾರದ ಭಾರತ ದೇಶ, ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಲ್ಲದೆ ಬರೀ ಮೂರು ವರ್ಷದಲ್ಲಿ ಬೆಳ್ತಂಗಡಿ ತಾಲೂಕಿಗೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಅನುದಾನ ತರುವ ಮೂಲಕ ಬೆಳ್ತಂಗಡಿ ಇವತ್ತು ಅಭಿವೃದ್ದಿ ಆಗುತ್ತಾ ಇದೆ, ಬೆಳ್ತಂಗಡಿ ತಾಲೂಕಿನ ಮುಗೆರಡ್ಕ ಎಂಬಲ್ಲಿ ಸುಮಾರು ಇನ್ನೂರ ನಲುವತ್ತು ಕೋಟಿ ವೆಚ್ಚದಲ್ಲಿ ಏತ ನೀರಾವರಿ ಯೋಜನೆ ಜಾರಿಗೊಳಿಸಲಾಗಿದೆ, ಇದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಪ್ರಥಮವಾಗಿ ಅನುದಾನ ಬಂದಿದೆ ಎಂದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್,ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್,ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments