ಕೊನೆಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು ಬೀಳುಗಳನ್ನು ಹೇಳುವಾಗ ಭಾವುಕರಾದರು. ಇಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. 75 ವರ್ಷದ ಬಳಿಕ ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ ನರೇಂದ್ರ ಮೋದಿ, ಮತ್ತು ಅಮಿತ್ ಶಾ, ಜೆ.ಪಿ. ನಡ್ಡಾ ಅವರಿಗೆ ಧನ್ಯವಾದ ಸಮರ್ಪಿಸಿದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್. ಯಡಿಯೂರಪ್ಪ
RELATED ARTICLES
